ಮೈಸೂರು : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ‘ನಾದಬ್ರಹ್ಮ’ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿದ್ದು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು.
ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ:
ದಸಾರ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದೆ, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.ರಾಮನಗರ ಬಳಿ ರಸ್ತೆ ಅಪಘಾತ – 6 ಮಂದಿ ದುರಂತ ಸಾವು
ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್ಹೌಸ್ ವೃತ್ತ, ಎಲ್ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು