ಈ ಬಾರಿ ನಾಡ ದಸರಾ ‘ನಾದಬ್ರಹ್ಮ’ ಹಂಸಲೇಖರಿಂದ ಉದ್ಘಾಟನೆ – ಸಿಎಂ

Team Newsnap
1 Min Read

ಮೈಸೂರು : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ‘ನಾದಬ್ರಹ್ಮ’ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿದ್ದು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು.

ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ:

ದಸಾರ ಅಕ್ಟೋಬರ್​ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದೆ, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ.

ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.ರಾಮನಗರ ಬಳಿ ರಸ್ತೆ ಅಪಘಾತ – 6 ಮಂದಿ ದುರಂತ ಸಾವು

ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ, ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದರು.

Share This Article
Leave a comment