ಈ ಶೈಕ್ಷಣಿಕ ವರ್ಷದಲ್ಲೂ 1 ರಿಂದ 9 ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ , ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಂತಿಮವಾಗಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಸೋಂಕು ಎಂಬುದು ನಿಶ್ಚಿತ. ಸದ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಹೇಳಿದರು.
ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಬಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗೂ ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯವೆನಿಸಿದೆ.ತಾಂತ್ರಿಕ ಸಲಹಾ ಸಮಿತಿಯೂ ಇದೇ ರೀತಿಯ ಸಲಹೆ ಮಾಡಿದೆ ಎಂದು ಸಚಿವರು ಹೇಳಿದರು.
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು