January 12, 2025

Newsnap Kannada

The World at your finger tips!

sidda

Pic Credits : deccanherald.com

ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಯಾವುದೇ ಕಾರಣಕ್ಕೂ ವಾಪಸ್ಸು ಇಲ್ಲ: ಸಿದ್ದರಾಮಯ್ಯ

Spread the love

ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿ ಪಕ್ಷದ. ಸರ್ಕಾರದ ರಚನೆಗೆ ಸಹಾಯ ಮಾಡಿದವರನ್ನು ಮತ್ತೆ ಕಾಂಗ್ರೆಸ್ಗೆ ಸೇರಿಸಿ ಸೇರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ,
ವ್ಯಾಪಾರಕ್ಕಾಗಿ ನಮ್ಮ ಪಾರ್ಟಿ ಬಿಟ್ಟುಹೋದವರಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ನಮ್ಮ ಪಕ್ಷ ಬಿಟ್ಟು ಅಲ್ಲಿ ಹೋದವರಿಗೆ ಅಲ್ಲಿ ಹೋಗಿ ಕುಳಿತವರಿಗೆ ಉತ್ತರ ಕೊಡುವುದಿಲ್ಲ.‌ ಪಕ್ಷಬಿಟ್ಟು ಹೋದವರನ್ನು ಯಾವುದೇ ಕಾರಣಕ್ಕೂ ಸೇರಿಸುವುದಿಲ್ಲ. ನಮ್ಮ ಪಕ್ಷಕ್ಕೆ ದ್ರೋಹ ಬಗೆದು ಮೋಸ ಮಾಡಿದವರಿಗೆ ಮತ್ತೆ ಅವಕಾಶವಿಲ್ಲ. ಬಿ.ಸಿ. ಪಾಟೀಲ್ ಹೇಳಿಕೆಗಳಿಗೆಲ್ಲ ಉತ್ತರ ಕೊಡುವುದಕ್ಕೆ ಆಗಲ್ಲ ಎಂದಿದ್ದಾರೆ.

ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ. ಇರುವುದು ಒಂದೇ ಬಣ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ ಬಣ ಅಂತ ಇಲ್ಲ.. ಅಖಿಲ ಭಾರತ ಕಾಂಗ್ರೆಸ್ ಬಣ ಒಂದೇ ಎಂದರು.

ಡಿ.ಕೆ. ಶಿವಕುಮಾರ್ ದೆಹಲಿ ಪ್ರಯಾಣದ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್ ನನಗೆ ಹೇಳಿ ಹೋಗಿದ್ದಾರೆ.. ನನಗೆ ಪರ್ಸನಲ್ ಕೆಲಸ ಇದೆ ಅಂತಾ . ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!