ನನ್ನ ವಿರುದ್ಧ ಎತ್ತಿ ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳನ್ನು ಯಾರು ಇವರ ಕೈಯಲ್ಲಿ ಮಾಡಿಸುತ್ತಿದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಸಂಸದೆ ಸುಮಲತಾ ಇಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗಳನ್ನು ಮಾಡುತ್ತಿದ್ದಾರೆ. ಈ ರೀತಿ ಮಾಡುತ್ತಿರುವವರು ನಿಜಕ್ಕೂ ಕಷ್ಟದಲ್ಲಿರುವ ಜನ ಅಂತೂ ಅಲ್ಲವೇ ಅಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
ನಾನು ಯಾವತ್ತೂ ಉಪಯೋಗಕ್ಕೆ ಬಾರದ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ಟೈಮು ಇಲ್ಲ ಇಷ್ಟವೂ ಇಲ್ಲ. ಇವರುಗಳಿಗೆ ಪ್ರತಿಕ್ರಿಯೆ ನೀಡುತ್ತ ಕೂತರೆ ನಾನು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ ಎಂದರು.
ಕೊರೋನಾ ದಿಂದಾಗಿ ಕನ್ನಡ ಚಿತ್ರರಂಗದ ಕಲಾವಿದರು ಮಾತ್ರವಲ್ಲದೆ ನಾಡಿನ ಸಮಸ್ತ ಜನತೆ ಸಂಕಷ್ಟದಲ್ಲಿದ್ದಾರೆ ಸದ್ಯದ ಮಟ್ಟಿಗೆ ಮಂಡ್ಯ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ಕೊರತೆಯಾಗಿರುವ ಬಗ್ಗೆ ಈಗಾಗಲೇ ನಾನು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೇನೆ ಸರ್ಕಾರದಿಂದ ಜಿಲ್ಲೆಗೆ ಅಗತ್ಯವಾದಷ್ಟು ಲಸಿಕೆಗಳನ್ನು ಸರಬರಾಜು ಮಾಡುವ ಭರವಸೆಯು ದೊರೆತಿದೆ ಎಂದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ನಂಬುಗೆಯೇ ಇಂಬು
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.