February 24, 2026

Newsnap Kannada

The World at your finger tips!

dks

ಸ್ವಾಭಿಮಾನಕ್ಕೆ ಧಕ್ಕೆಯಾದವರು ಕಾಂಗ್ರೆಸ್‌ಗೆ ಸೇರ್ತಾರೆ : ಡಿಕೆಶಿ

Spread the love

ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್‌ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ ಸೋಮವಾರ ತಿಳಿಸಿದರು.

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್‌ ಪಕ್ಷವನ್ನು ಸೇರುತ್ತಿದ್ದಾರೆ.

ಈ ರಾಜ್ಯದಲ್ಲಿ ಬದಲಾವಣೆ ತರಲು ಬರುತ್ತಿದ್ದಾರೆ ಎಂದರು.

ಶೆಟ್ಟರ್‌ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಷರತ್ತು ಹಾಕಿಲ್ಲ. ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ.

ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್‌ ಸೇರ್ಪಡೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ 150 ಸೀಟ್‌ ಕಾಂಗ್ರೆಸ್‌ಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನು ಓದಿ –ನಂಗೆ ಯಾವುದೇ ಹುದ್ದೆ ಬೇಡಾಗಿತ್ತು : ಶಾಸಕನಾಗಿ ಕೆಲಸ ಮಾಡುತ್ತಿದ್ದೆ – ಶೆಟ್ಟರ್

error: Content is protected !!