ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದರು
ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ