ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ, ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರು ಬೆದರಿಕೆ ಕರೆಗಳ ಬಗ್ಗೆ ದೂರು ನೀಡಿದ್ದಾರೆ.
ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಮೇ 1ರಂದು ಮೃತ್ಯುಂಜಯ ಅವರಿಗೆ ಕರೆ ಮಾಡಿದ್ದ ಅಪರಿಚಿತ, ತಾನು ಲೋಕಾಯುಕ್ತ ಪೊಲೀಸ್ ಎಂಬುದಾಗಿ ಹೇಳಿದ್ದ. ತಮ್ಮ ಕಚೇರಿಯಲ್ಲಿರುವ ಎಲ್ಲರ ಮೇಲೆ ದಾಳಿ ಮಾಡುವುದಾಗಿ ಹೇಳಿ ಬೆದರಿಸಿದ್ದ. ಮಹಾಂತೇಶ ಬೀಳಗಿ, ಅವರ ಆಪ್ತ ಕಾರ್ಯದರ್ಶಿ ಪಿ. ಚಂದ್ರಶೇಖರ್, ತಾಂತ್ರಿಕ ಸಹಾಯಕ ಎಸ್.ವಿ. ನವನೀತ್ ಕೃಷ್ಣನ್ ಅವರಿಗೂ ಕರೆ ಮಾಡಿ ಆರೋಪಿ ಮಾತನಾಡಿದ್ದ ಎನ್ನಲಾಗಿದೆ
‘ಲೋಕಾಯುಕ್ತ ಪೊಲೀಸರ ಹೆಸರು ಹೇಳಿಕೊಂಡು ವಿನಾಕಾರಣ ಕರೆ ಮಾಡುತ್ತಿರುವ ಅಪರಿಚಿತ ಕಿರುಕುಳ ನೀಡುತ್ತಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
ಕೃತ್ಯ ಎಸಗಿರುವ ಆರೋಪಿ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ