ಬಿಜೆಪಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣನನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ವಿರುದ್ಧ ಕೊಲೆ ಸಂಚು ರೂಪಿಸಿದ ಆರೋಪ ಈಗ ಕೇಳಿಬಂದಿದೆ.
ಕೊಲೆಗೆ ಸಂಚು ರೂಪಿಸಿ ಮಾತನಾಡಿದ್ದಾರೆ ಎನ್ನಲಾಗಿರುವ ವಿಡಿಯೋ ಸಿಸಿಬಿ ಅಧಿಕಾರಿಗಳಿಗೆ ಲಭ್ಯವಾಗಿದೆಯಂತೆ ಈ ಹಿನ್ನೆಲೆಯಲ್ಲಿ ಗೋಪಾಲಕೃಷ್ಣ ಅವರನ್ನ ವಶಕ್ಕೆ ಪಡೆದು ನಿನ್ನೆ ತಡರಾತ್ರಿವರೆಗೂ ತನಿಖೆ ನಡೆಸಲಾಗಿದೆ.
ವಿಶ್ವನಾಥ್ ಬೆಂಬಲಿಗನೇ ಬಂಧನ :
ತನಿಖೆ ವೇಳೆ ವಿಶ್ವನಾಥ್ ಬೆಂಬಲಿಗ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್ ಎಂಬಾತನನ್ನೂ ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.
ಈ ಕುಳ್ಳದೇವರಾಜ್, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ, ಎಸ್.ಆರ್. ವಿಶ್ವನಾಥ್ ಬಗ್ಗೆ ಮಾತನಾಡಿದ್ದನ್ನು ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಅಂದ್ಹಾಗೆ ಈ ಹಿಂದೆ ಯಲಹಂಕ ವಿಧಾನಸಭೆ ಕ್ಷೇತ್ರದಲ್ಲಿ ಗೋಪಾಲಕೃಷ್ಣ, ವಿಶ್ವನಾಥ್ ವಿರುದ್ಧ ಎರಡು ಬಾರಿ ಸ್ಪರ್ಧಿಸಿ ಸೋತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು