ಬೇಸಿಗೆ ಸಮಯ, ಶಾಲೆಗೆ ರಜೆ ಕಾರಣದಿಂದಾಗಿ ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ಜಲ ಸಮಾಧಿಯಾದ ಘಟನೆ ತಿಪಟೂರು ಸಮೀಪ ಮಾರನಗೆರೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ತರುಣ್ (11), ದೀಪಕ್ (13), ಕೌಶಿಕ್ (13) ಜಲ ಸಮಾಧಿಯಾದವರು.
ಮೃತ ಬಾಲಕರು ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಇಂದು ಶಾಲೆಗೆ ರಜೆ ಇತ್ತು. ಕಾರಣ 6 ಜನ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದರು. ಈ ವೇಳೆ ಒಬ್ಬ ಹುಡುಗ ನೀರಿನಲ್ಲಿ ಮುಳುಗುತ್ತಿರೋದನ್ನು ಕಂಡ ಉಳಿದಿಬ್ಬರು ಬಾಲಕರು ಆತನನ್ನು ರಕ್ಷಿಸಲು ತೆರಳಿದ್ದಾರೆ.
ಆದರೆ ಅವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದ ಮಕ್ಕಳು ಹೋಗಿ ಮಕ್ಕಳ ಪೋಷಕರಿಗೆ ವಿಷಯ ತಿಳಿಸಿದ್ದಾರೆ.
ತಿಪಟೂರು ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ