ದೇವನಹಳ್ಳಿ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

Team Newsnap
1 Min Read

ದೇವನಹಳ್ಳಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದಲ್ಲಿ ನಿನ್ನೆ ಮಧ್ಯಾಹ್ನ ಶಾಲೆ ಮುಗಿಸಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ಕಾರ್ತಿಕ್ (16), ಧನುಷ್ (15) ಹಾಗೂ ಗುರುಪ್ರಸಾದ್ (6) ಎಂದು ಗುರುತಿಸಲಾಗಿದೆ.ಜೂ. 27 ಬೆಂಗಳೂರು -ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ನಾಪತ್ತೆಯಾಗಿದ್ದ ಧನುಷ್, ಕಾರ್ತಿಕ್ ಹಾಗೂ ಗುರುಪ್ರಸಾದ್ ನನ್ನು ಪೋಷಕರು ನಿನ್ನೆ ರಾತ್ರಿ ಹುಡುಕಾಟ ನಡೆಸಿದ್ದರು. ಬಳಿಕ ಕೆರೆಯಲ್ಲಿ ಓರ್ವ ಬಾಲಕನ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರು ಬಾಲಕರಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಲಾಗುತ್ತಿದೆ.

Share This Article
Leave a comment