ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಸೋಮವಾರದಿಂದ ಮೂರು ದಿನಗ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿ ಇರುತ್ತಾರೆ.
ಮೂರು ದಿನಗಳ ದೆಹಲಿ ಪ್ರವಾಸಕ್ಕೆ ಸಿದ್ದತೆ ಮಾಡಿಕೊಂಡಿರುವ ಸಿಎಂ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.
ಸಂಸದರ ಸಭೆ ಬಳಿಕ ವರಿಷ್ಠರನ್ನು ಸಿಎಂ ಭೇಟಿಯಾಗಬಹುದು ಎನ್ನಲಾಗಿದೆ.
ದೆಹಲಿಗೆ ತೆರಳಲು ಸಿಎಂ ಬೊಮ್ಮಾಯಿ ಸಜ್ಜಾಗಿದ್ದಾರೆ. ಆದರೆ ಈವರೆಗೂ ಭೇಟಿಗೆ ಹೈಕಮಾಂಡ್ ಸಮಯ ನೀಡಿಲ್ಲ. ಹಲವು ಬಾರಿ ಪ್ರಯತ್ನಿಸಿದರೂ ಈವರೆಗೂ ವರಿಷ್ಠರು ಸಮಯ ನಿಗದಿ ಮಾಡಿಲ್ಲ. ಗೊಂದಲದ ನಡುವೆಯೂ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಸಮೀಪವಿದೆ , ಮೊದಲೆರಡು ಹಂತಗಳ ಚುನಾವಣೆಯಲ್ಲಿ ವರಿಷ್ಠರು ಬ್ಯುಸಿಯಾಗಿದ್ದಾರೆ. ವರಿಷ್ಠರು ಉತ್ತರ ಪ್ರದೇಶ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಭೇಟಿಗೆ ಇನ್ನೂ ಸಮಯ ನಿಗದಿ ಮಾಡಿಲ್ಲ. ಒಂದು ವೇಳೆ ಸಮಯ ಸಿಕ್ಕರೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುವುದು ಅನುಮಾನ. ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ವಿಸ್ತೃತ ಚರ್ಚೆಯಾಗುವ ಸಾಧ್ಯತೆ ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು