ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Team Newsnap
1 Min Read

ಚಾಮರಾಜನಗರ: ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದಾಗಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

ಬೇಡರಪುರ ಗ್ರಾಮದ ಮಹದೇವಸ್ವಾಮಿ (48), ಪತ್ನಿ ಸವಿತಾ (40) ಮತ್ತು ಮಗಳು ಸಿಂಚನಾ (13) ಆತ್ಮಹತ್ಯೆ ಮಾಡಿಕೊಂಡವರು.

ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಗೆ ಹೋದಾಗ ಮನೆಯಲ್ಲಿದ್ದ ಮೂವರೂ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್, ಏಕದಿನ ಸರಣಿ ಪ್ರವಾಸಕ್ಕೆ ಭಾರತ ತಂಡ ಪ್ರಕಟ

ಆದರೆ ಕುಟುಂಬದ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತಿತ್ತು ಎಂದು ಹೇಳಲಾಗಿದೆ. ಅದೇ ವಿಚಾರ ಸಾವಿಗೆ ಕಾರಣವಾಯಿತಾ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment