ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಲಗೇಜ್ ಆಟೋ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದವರಾದ ರತ್ನಮ್ಮ (53), ಲಕ್ಕಮ್ಮ (40) ಹಾಗೂ ಮಂಜುನಾಥ (32) ಮೃತರು. ನೆಲಮಂಗಲದಲ್ಲಿ ತರಕಾರಿ ತೆಗೆದುಕೊಂಡು ಬೆಳ್ಳೂರಿಗೆ ವಾಪಸ್ ಹೋಗುವಾಗ ಈ ಅಪಘಾತ ಸಂಭವಿಸಿದೆ. ಇನ್ನೂ ಮೂವರು ಗಾಯಗೊಂಡಿದ್ದು, ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಹಿಣಿ ಸಿಂಧೂರಿ ಪತಿ ಸುಧೀರ್ ಯಲಹಂಕದಲ್ಲಿ ಭೂ ಕಬಳಿಕೆ ? ಡಿಜಿಪಿಗೆ ಟ್ವೀಟ್ ಮೂಲಕ ದೂರು
ಮೂವರ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.