ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯವು ಮಂಗಳೂರಿನ ಫ್ಯಾಕ್ಟರಿಯೊಂದರಲ್ಲಿ 8 ವರ್ಷದ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಆರೋಪಿಗಳಾದ ಜಯಸಿಂಗ್, ಮುಕೇಶ್ ಸಿಂಗ್, ಮತ್ತು ಮನೀಶ್ ತಿರ್ಕಿಗೆ ಈ ಶಿಕ್ಷೆ ವಿಧಿಸಲಾಗಿದೆ. 2021ರ ನವೆಂಬರ್ 21 ರಂದು ಮಂಗಳೂರಿನ ಉಳಾಯಿಬೆಟ್ಟು ಪ್ರದೇಶದ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಈ ಕೃತ್ಯ ನಡೆದಿತ್ತು. ಆ ಸಂದರ್ಭದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು ಮತ್ತು ಚರಂಡಿಗೆ ತಳ್ಳಲಾಗಿತ್ತು.
ಹಿಂದೆ, ಮಂಗಳೂರು ಪೊಲೀಸರು ಹೊರ ರಾಜ್ಯದ ಈ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆ ಮತ್ತು ಐಪಿಸಿ 302 ಅಡಿ ಪ್ರಕರಣ ದಾಖಲಿಸಲಾಗಿದೆ.ಇದನ್ನು ಓದಿ –ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
ಈ ಮೊದಲು ಕೂಡ ಇವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ತಾಯಿ-ತಂದೆಯರು ಕುಡಿತದ ಚಟಕ್ಕೆ ಬಿದ್ದಿದ್ದು, ಆ ಪರಿಸ್ಥಿತಿಯನ್ನೇ ಇವರು ದುರುಪಯೋಗ ಮಾಡಿಕೊಂಡಿದ್ದರು.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ