ನಂಜನಗೂಡು : ಈಜಲು ಕಪಿಲಾ ನದಿ ನೀರಿಗೆ ಇಳಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದ ಬಳಿ ನಡೆದಿದೆ.
ಬಿಹಾರ ಮೂಲದ ಮಿಲನ್ (25), ಮೋಹನ್ (19), ತರುಣ್ (19) ಮೃತ ಕಾರ್ಮಿಕರು.
ಬಿಹಾರ್ ರಾಜ್ಯದವರಾದ ಇವರು ಮೈಸೂರಿ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಿಸಿಲಿನ ಸೆಕೆ ತಾಳಲಾರದೆ ಈಜಲು ಎಂದು ಕಪಿಲ ನದಿ ನೀರಿಗೆ ಇಳಿದಿದ್ದಾರೆ. ಆದರೆ ಈ ವೇಳೆ ನದಿ ನೀರಿನ ಸುಳಿಗೆ ಸಿಕ್ಕ ಮೂವರು ಯುವರಕು ಹೊರ ಬರಲಾಗಿಲ್ಲ. ಇದರಿಂದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನೀರಿನಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.ಇಂದು ಮೈತ್ರಿ ಅಭ್ಯರ್ಥಿ ಘೋಷಣೆ : ಮಂಡ್ಯದಿಂದ ಹೆಚ್‌ಡಿಕೆ ಸ್ಪರ್ಧೆ ಖಚಿತ ?
ಈ ವೇಳೆ ಮಿಲನ್ ಮೃತದೇಹ ಪತ್ತೆಯಾಗಿದ್ದು ಹೊರ ತೆಗೆಯಲಾಗಿದೆ. ಆದರೆ ಇನ್ನಿಬ್ಬರ ಮೃತದೇಹಗಳಿಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ