ಟಿಕೆಟ್ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಫೈಟಿಂಗ್

Team Newsnap
1 Min Read
Ticket fight – Congress workers fighting in KPCC office ಟಿಕೆಟ್ ಕಚ್ಚಾಟ – KPCC ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಫೈಟಿಂಗ್

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಶುರುವಾಗಿ, ಕೈ-ಕೈ ಮೀಲಾಯಿಸಿದ್ದಾರೆ.

ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ (KPCC) ಕಚೇರಿಯಲ್ಲಿ ರಾಜಾಜಿನಗರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಕೇಂದ್ರ ಸಚಿವ ಸಂಪುಟ ಪುನಾರಚನೆ ನಿರೀಕ್ಷೆ – ರಾಜ್ಯಕ್ಕೆ ಆದ್ಯತೆ? 

ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂರು ಬಣಗಳ ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಪದ್ಮಾವತಿ, ಮನೋಹರ್, ಮಾಜಿ ಉಪ ಮೇಯರ್ ಪುಟ್ಟರಾಜು ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಕಿತ್ತಾಟ ಶುರುವಾಗಿದೆ.

ಈಗಾಗಲೇ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿರುವುದಾಗಿ ಕಾರ್ಯಕರ್ತರು ಹೇಳಿದ್ದಾರೆ. ಈ ಬಗ್ಗೆ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Share This Article
Leave a comment