ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾಲ್ನಡಿಗೆಯ ಟಿಪ್ಪು ಫ್ಲೆಕ್ಸ್ ಧ್ವಂಸ- ಪುನೀತ್ ಕೆರೆಹಳ್ಳಿ, ಬೆಂಬಲಿಗರ ಕೃತ್ಯ

Team Newsnap
1 Min Read

ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಪ್ರತಿಯಾಗಿ ಟಿಪ್ಪು ಭಾವಚಿತ್ರವನ್ನು ಬೆಂಗಳೂರಿನಲ್ಲಿ ವಿರೂಪಗೊಳಿಸಲಾಗಿದೆ.

ಬೆಂಗಳೂರಲ್ಲಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಬ್ಯಾನರ್ ನಲ್ಲಿ ಹಾಕಲಾಗಿದ್ದ ಟಿಪ್ಪು ಫೋಟೋ ಹರಿದು ರಾಷ್ಟ್ರ ರಕ್ಷಣ ಪಡೆಯ ಕಾರ್ಯಕರ್ತರು ವಿಕೃತಿ ಮೆರೆದಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವಕ್ಕೆಒಂದು ದಿನವಷ್ಟೆ ಬಾಕಿ ಇದೆ. ರಾಜಧಾನಿ ಬೆಂಗಳೂರಿನ ಮೂಲೆ ಮೂಲೆಯಲ್ಲಿ ರಾಷ್ಟ್ರಧ್ವಜ ರಾರಾಜಿಸುತ್ತಿದೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಮಡಿದ ಗಣ್ಯರ ಫ್ಲೆಕ್ಸ್ ಗಳು ಎಲ್ಲೆಲ್ಲೂ ರಾರಾಜಿಸುತ್ತಿದೆ. ಆದರೆ ಇದೇ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜಕೀಯ ತಿರುವನ್ನು ಪಡೆದುಕೊಂಡಿದೆ.

ಟಿಪ್ಪು ಫೋಟೋಯಿರುವ ಬ್ಯಾನರ್ ನನ್ನು ಪುನೀತ್ ಕೆರೆಹಳ್ಳಿ ಅಂಡ್ ಟೀಮ್ ಶನಿವಾರ ರಾತ್ರಿ 10:30 ರ ಸುಮಾರಿಗೆ ಹರಿದಿದೆ.

ಬೆಂಗಳೂರಿನಾದ್ಯಂತ ಪ್ರಮುಖ ರಸ್ತೆಗಳಲ್ಲಿ ರಾಷ್ಟ್ರ ಧ್ವಜಗಳು, ಲೈಟಿಂಗ್ಸ್ ಗಳು ರಾರಾಜಿಸುತ್ತಿದೆ. ಹೀಗಿರುವ ಜನವರಿ 15 ರಂದು ಕೈ ಪಡೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರ ಫೋಟೊ ಇರುವ ಫ್ಲೆಕ್ಸ್ ಗಳನ್ನು ರಸ್ತೆಯುದ್ದಕ್ಕೂ ಹಾಕಿದ್ದಾರೆ. ಆದರೆ ಇದು ಪುನೀತ್ ಕೆರೆಹಳ್ಳಿ ಕಣ್ಣು ಕೆಂಪಾಗಿಸಿದೆ.

Share This Article
Leave a comment