SSLC ವಿದ್ಯಾರ್ಥಿಗಳಿಗೆ ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡಿ ಪಾಸ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಇದನ್ನು ಓದಿ : ಮೇ 3ನೇ ವಾರ SSLC Result :ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ rules
ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.
ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾದರೆ, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್ ಅಂಕಗಳಾಗಿ ದೊರೆಯುತ್ತವೆ.
ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ.
ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಆದರೆ, ಈ ಗ್ರೇಸ್ ಅಂಕಗಳನ್ನು ಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.
2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್ ಅಂಕದಿಂದಾಗಿ ಶೇ.9ರಷ್ಟು ವಿದ್ಯಾರ್ಥಿಗಳು(Students) ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು.
ಇದನ್ನು ಓದಿ : ರಮ್ಯಾ ನೀವು ಎಷ್ಟು ದಿನ ಎಲ್ಲಿದ್ದಿರಿ ? KPCC ಸೋಷಿಯಲ್ ಮೀಡಿಯಾ ಮುಖ್ಯಸ್ಥ ನಾಯ್ಡು ಪ್ರಶ್ನೆ
ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್ ಅಂಕ ನೀಡಲಾಗುತ್ತಿದೆ.
ಬಹುಶಃ ಈ ಬಾರಿಯೂ ಗ್ರೇಸ್ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
SSLC ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ನ್ನುClick ಮಾಡಿ :
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು