May 21, 2022

Newsnap Kannada

The World at your finger tips!

b c nagesh

SSLC ಪೇಲ್‌ ಕಡಿಮೆ ಮಾಡಲು ಶೇ 10 ರಷ್ಟು ಗ್ರೇಸ್ ಮಾರ್ಕ್ಸ್ : ಸರ್ಕಾರದ ನಿರ್ಧಾರ

Spread the love

SSLC ವಿದ್ಯಾರ್ಥಿಗಳಿಗೆ ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟು ಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಮಾರ್ಕ್ಸ್ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.

ಇದನ್ನು ಓದಿ : ಮೇ 3ನೇ ವಾರ SSLC Result​ :ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಕಠಿಣ rules

ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.

ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾದರೆ, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್‌ ಅಂಕಗಳಾಗಿ ದೊರೆಯುತ್ತವೆ.

ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ.

ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಈ ಗ್ರೇಸ್‌ ಅಂಕಗಳನ್ನು ಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟು ವಿದ್ಯಾರ್ಥಿಗಳು(Students) ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು.

ಇದನ್ನು ಓದಿ : ರಮ್ಯಾ ನೀವು ಎಷ್ಟು ದಿನ ಎಲ್ಲಿದ್ದಿರಿ ? KPCC ಸೋಷಿಯಲ್ ಮೀಡಿಯಾ ಮುಖ್ಯಸ್ಥ ನಾಯ್ಡು ಪ್ರಶ್ನೆ

ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್‌ ಅಂಕ ನೀಡಲಾಗುತ್ತಿದೆ.

ಬಹುಶಃ ಈ ಬಾರಿಯೂ ಗ್ರೇಸ್‌ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

SSLC ಫಲಿತಾಂಶಕ್ಕಾಗಿ ಈ ಕೆಳಗಿನ ಲಿಂಕ್ ನ್ನುClick ಮಾಡಿ :

http://karresults.nic.in/

error: Content is protected !!