ಬಸವರಾಜ ಬೊಮ್ಮಾಯಿ ಇಂದು 11 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರ ಜೊತೆ ಮಾತನಾಡಿ, ಇಂದು ನಾನು ಒಬ್ಬನೇ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದೇನೆ. ಇದಕ್ಕೂ ಮುನ್ನ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ಹೇಳಿದರು.
ಧರ್ಮೇಂದ್ರ ಪ್ರಧಾನ್ ಅವರ ಬಳಿ ಚರ್ಚೆ ನಡೆಸಿದ ಬಳಿಕ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದೇನೆ. ಇದಾದ ಮೇಲೆ ಸಣ್ಣ ಕ್ಯಾಬಿನೇಟ್ ರಚನೆ ಮಾಡಲಿದ್ದೇನೆ. ಇಂದು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಎದುರಾಗಿರುವ ನೆರೆ ಹಾಗೂ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆಯೂ ನಡೆಯಲಿದೆ. ಇವತ್ತು ಎಲ್ಲವನ್ನೂ ಚರ್ಚೆ ನಡೆಸಿ ನಿರ್ಧಾರ ಮಾಡಲಿದ್ದೇನೆ. ಸದ್ಯ ದೇವರ ದರ್ಶನ ಪಡೆದು ಕೆಕೆ ಗೆಸ್ಟ್ ಹೌಸ್ಗೆ ತೆರಳಲಿದ್ದೇನೆ. ರಾಜ್ಯ ಪ್ರವಾಸ ಮಾಡಿ ಉತ್ತಮ ಆಡಳಿತ ನೀಡುವ ಬಗ್ಗೆ ಅಧಿಕಾರಗಳ ಸಭೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಿದ್ದೇನೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ