ಇಂದೇ ಅಪ್ಪು ಅಭಿನಯದ ಕೊನೆ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್‌ಗಳಲ್ಲಿ ಬಿಡುಗಡೆ ಆಗಿದೆ. ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಥಿಯೇಟರಿಗೆ ಆಗಮಿಸಿ ಹಬ್ಬ ಮಾಡುತ್ತಿದ್ದಾರೆ.
ಅಪ್ಪು ಇಲ್ಲದೇ ಮೊದಲ ಬಾರಿಗೆ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅಪ್ಪು ಅಗಲಿದ ನೋವಿದ್ದರೂ, ಅವರ ಕೊನೆ ಸಿನಿಮಾ ಜೇಮ್ಸ್ ನ್ನು ನೋಡುವ ಮೂಲಕ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.
ಇಂದು ಬೆಳಗ್ಗೆ 5 ಗಂಟೆಗೆ ಚಿತ್ರ ತೆರೆಕಂಡಿದೆ. ಥಿಯೇಟರ್ ಗಳ ಮುಂದೆ ಪುನೀತ್ ರಾಜ್‍ಕುಮಾರ್ ಅವರ ಬೃಹತ್ ಕಟೌಟ್‍ಗಳನ್ನು ಹಾಕಿ ಜೇಮ್ಸ್ ಜಾತ್ರೆಯನ್ನು ಆಚರಣೆ ಮಾಡುತ್ತಿದ್ದಾರೆ.
ಥಿಯೇಟರ್ ಮುಂಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ಥಿಯೇಟರ್‌ಗೆ ಬಾಳೆ ಕಂದು, ಮಾವಿನ ಸೊಪ್ಪು, ಹೂವಿನ ಹಾರವನ್ನು ಕಟ್ಟಿ ಅಲಂಕರಿಸಿದ್ದಾರೆ. ಅಪ್ಪು ಅಭಿಮಾನಿಗಳು ಅಪ್ಪು ಪೋಸ್ಟರ್‌ಗೆ ಹಾಲಿನ ಅಭಿಷೇಕ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್