ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ಗೆದ್ದಿದ್ದಾರೆ.
ಮೇರಿ ಕೋಮ್ ನಂತರ ಒಲಿಂಪಿಕ್ ಪದಕ ಗಳಿಸಿದ ಎರಡನೇ ಭಾರತೀಯ ಮಹಿಳೆ ಅವರೆನಿಸಿದ್ದಾರೆ.
ಈ ಬಾರಿಯ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಭಾರತದ ಏಕೈಕ ಬಾಕ್ಸರ್ ಅವರೆನಿಸಿದ್ದಾರೆ.
ಈ ಮೂಲಕ ಭಾರತದ ಪದಕದ ಸಂಖ್ಯೆ ಮೂರಕ್ಕೇರಿದೆ.
ಮಹಿಳಾ ಬಾಕ್ಸಿಂಗ್ನ 69 ಕೆಜಿ ವಿಭಾಗದ ಸೆಮಿಫೈನಲ್ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಧ್ಯವಾಗಲೇ ಇಲ್ಲ.
ಬುಸೆನಾಜ್ ಆಕ್ರಮಣಕಾರಿ ಆಟಕ್ಕೆ ಸೋಲು ಅನುಭವಿಸಿದರು. ಸೆಮಿಫೈನಲ್ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು. ಆದರೆ ಅಂತಿಮ ನಾಲ್ಕರ ಘಟ್ಟದಲ್ಲಿ ಎಡವಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು