November 22, 2024

Newsnap Kannada

The World at your finger tips!

highway , toll , dashpath

ಮತ್ತೆ ಟೋಲ್‌ ಶುಲ್ಕ ಹೆಚ್ಚಳ, ಏಪ್ರಿಲ್‌ 1 ರಿಂದಲೇ ಹೊಸ ದರ

Spread the love

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ಆರಂಭವಾಗಿ 17 ದಿನದಲ್ಲೇ ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್‌ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.

ಶುಲ್ಕದ ವಿವರ

ಈ ಹೊಸ ಟೋಲ್‌ ದರವು ಶನಿವಾರ (ಏಪ್ರಿಲ್‌ 1)ದಿಂದ ಜಾರಿ ಆಗಲಿದೆ. ಟೋಲ್‌ ದರದಲ್ಲಿ ಶೇ.22ರಷ್ಟು ಹೆಚ್ಚಳ ಮಾಡಲಾಗಿದೆ.

ಹೊಸ ಟೋಲ್ ದರದ ವಿವರ ಇಲ್ಲಿದೆ

  1. ಕಾರು, ವ್ಯಾನ್‌, ಜೀಪ್‌: 165 ರೂಪಾಯಿ, ದ್ವಿಮುಖ ಸಂಚಾರ 250 ರೂಪಾಯಿ ಮತ್ತು ಒಂದು ಬಾರಿ 30 ರೂಪಾಯಿ, ಮತ್ತೊಂದು ಬಾರಿ 45 ರೂಪಾಯಿ ಹೆಚ್ಚಳ ಮಾಡಲಾಗಿದೆ.
  2. ಟ್ರಕ್‌, ಬಸ್‌, ಟ್ಯಾಕ್ಸಿ: 565 ರೂಪಾಯಿ, ದ್ವಿಮುಖ ಸಂಚಾರಕ್ಕೆ 850 ರೂಪಾಯಿ. ಹಾಗೆಯೇ ಒಂದು ಬಾರಿ 165 ರೂಪಾಯಿ, ಮತ್ತೊಂದು ಬಾರಿ 160 ರೂಪಾಯಿ ಹೆಚ್ಚಳ ಮಾಡಲಾಗಿದೆ.
  3. ಲಘು ವಾಹನಗಳು, ಮಿನಿ ಬಸ್‌: 270 ರೂಪಾಯಿ, ದ್ವಿಮುಖ ಸಂಚಾರಕ್ಕೆ 405 ರೂಪಾಯಿ ಆಗಿದೆ. ಅಲ್ಲದೇ ಒಂದು ಬಾರಿ 50 ರೂಪಾಯಿ ಎರಡನೇ ಬಾರಿ 75 ರೂಪಾಯಿ ಹೆಚ್ಚಳ ಮಾಡಲಾಗಿದೆ.
  4. ತ್ರಿ ಆಕ್ಸೆಲ್‌ ವಾಣಿಜ್ಯ ವಾಹನಗಳು: 615 ರೂಪಾಯಿ, ದ್ವಿಮುಖ ಸಂಚಾರಕ್ಕೆ 925 ರೂಪಾಯಿ ಆಗಿದೆ. ಮೊದಲ ಬಾರಿ 115 ರೂಪಾಯಿ ಹೆಚ್ಚಳ ಮಾಡಿದ್ದು, ಎರಡನೇ ಬಾರಿ 225 ರೂಪಾಯಿ ಹೆಚ್ಚಳ ಮಾಡಲಾಗಿದೆ.
  5. ಭಾರಿ ವಾಹನಗಳು: 885 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,330 ರೂಪಾಯಿ ಆಗಿದೆ. ಹಾಗೆಯೇ ಮೊದಲ ಬಾರಿ 165 ರೂಪಾಯಿ ಎರಡನೇ ಬಾರಿ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.
  6. ಇನ್ನು 7 ಅಥವಾ ಎಕ್ಸೆಲ್‌ ವಾಹನಗಳಿಗೆ 1,080 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,620 ರೂಪಾಯಿ ಆಗಿದೆ. ಮೊದಲ ಬಾರಿ 200 ರೂಪಾಯಿ ಎರಡನೇ ಬಾರಿ 305 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಇದನ್ನು ಓದಿ –ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ

Copyright © All rights reserved Newsnap | Newsever by AF themes.
error: Content is protected !!