ಗಣರಾಜ್ಯೋತ್ಸವ ಗಲಭೆಗೆ ಟೂಲ್ಕಿಟ್ ರಚಿಸುವಲ್ಲಿ ಭಾಗವಹಿಸಿ, ಪ್ರಮುಖ ಪಾತ್ರವಹಿಸಿದ್ದರು ಎಂಬ ಆರೋಪದ ಮೇಲೆ ಬಾಂಬೆ ಹೈಕೋರ್ಟ್ ವಕೀಲೆ ನಿಕಿತಾ ಜಾಕೋಬ್ ವಿರುದ್ಧವೂ ಇದೀಗ ದೆಹಲಿ ಪೊಲೀಸರು ವಾರಂಟ್ ಹೊರಡಿಸಿದ್ದಾರೆ.
ವಕೀಲೆ ನಿಕಿತಾ ಜಾಕೋಬ್ ಅವರನ್ನು ಶೀಘ್ರದಲ್ಲಿ ದೆಹಲಿ ಪೊಲೀಸರು ಬಂಧಿಸಲಿದ್ದಾರೆ. ಮತ್ತೋರ್ವ ಹೋರಾಟಗಾರ ಶಾಂತನೂ ಅವರನ್ನು ಪೊಲೀಸರು ಬಂಧಿಸುವುದಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಪರಿಸರ ಕಾರ್ಯಕರ್ತೆ ದಿಶಾ ರವಿ (21) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
ಈಗ ದೆಹಲಿ ಪೊಲೀಸರು ವಾರಂಟ್ ಹೊರಡಿಸುತ್ತಿದ್ದಂತೆ ನಿಕಿತಾ ಜಾಕೋಬ್ ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ಧಾರೆ.
ನಿಕಿತಾ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ 80 ದಿನಗಳಿಂದ ದೇಶದ ರೈತರು ದೆಹಲಿ ಹೊರ ವಲಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಗಣರಾಜ್ಯೋತ್ಸವದ ದಿನ ನಡೆದ ಗಲಭೆಯ ಸಂದರ್ಭದಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ, ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ರೈತರ ಪ್ರತಿಭಟನೆಯಲ್ಲಿ ಜನರು ಭಾಗವಹಿಸಬಹುದಾದ ವಿಭಿನ್ನ ಮಾರ್ಗಗಳನ್ನು ತಿಳಿಸುವ ಟೂಲ್ಕಿಟ್ ಅನ್ನು ವಕೀಲೆ ನಿಕಿತಾ ಶೇರ್ ಮಾಡಿದ್ದರು.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ