ರಾಜ್ಯದಲ್ಲಿ ಟೊಮೆಟೋ ಜ್ವರ ಭೀತಿ : ಉಡುಪಿಯಲ್ಲಿ 4 ವರ್ಷದ ಮಗುವಿಗೆ ಟೊಮೆಟೊ ಜ್ವರ ?

Team Newsnap
1 Min Read

ರಾಜ್ಯದಲ್ಲಿ ಶಾಲೆಗಳು ಆರಂಭ ಜೊತೆಯಲ್ಲೇ ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಆತಂಕ ಎಂದರೆ ಈ ವೇಳೆಯಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ.

ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ.

ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನು ಓದಿ :KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ: ; ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್

ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಜೊತೆಗೆ ಸಾಂಕ್ರಾಮಿಕ ರೋಗ ತಜ್ಞರು ಇದು ತಾನೇ ಕಡಿಮೆಯಾಗುವ ಸೋಂಕು, ಇದಕ್ಕೆ ನಿರ್ದಿಷ್ಟ ಔಷಧಿಯಿಲ್ಲ ಎಂದು ಹೇಳಿದ್ದಾರೆ.

ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ.

ಟೊಮೆಟೊ ಜ್ವರದ ಲಕ್ಷಣಗಳು ;

ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.

Share This Article
Leave a comment