ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಉದ್ಯಮಿ ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆಗೆ ನವೆಂಬರ್ 19 ರಂದು ನಿಶ್ಚಿತಾರ್ಥ ನೆರವೇರಲಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಅಮರ್ಥ್ಯ ಅಮೇರಿಕಾದಲ್ಲಿ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯ ಅವರು ಇಂಜಿನಿಯರಿಂಗ್ ಮಾಡಿ, ಡಿಕೆಶಿಗೆ ಸೇರಿದ ಕಾಲೇಜು ನೋಡಿಕೊಳ್ಳುತ್ತಿದ್ದಾರೆ.
ಅಮರ್ಥ್ಯ ಕಾಫಿ ಡೇ ಸಿದ್ಧಾರ್ಥ ಅವರ ಹಿರಿಯ ಪುತ್ರನಾಗಿದ್ದು ತಂದೆ ಮೃತಪಟ್ಟ ನಂತರ ಅವರ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಐಶ್ವರ್ಯಾ ತನ್ನ ತಂದೆ ನಡೆಸುತ್ತಿರುವ ಗ್ಲೋಬಲ್ ಎಂಜಿನಿಯರಿಂಗ್ ಕಾಲೇಜನ್ನು ನೋಡಿಕೊಳ್ಳುತ್ತಿದ್ದಾರೆ. ಡಿಕೆಶಿ ಮತ್ತು ಸಿದ್ದಾರ್ಥ ಇಬ್ಬರು ಬ್ಯುಸಿನೆಸ್ ಪಾರ್ಟನರ್ ಕೂಡ ಆಗಿದ್ದರು. ಸಿದ್ಧಾರ್ಥ ಹೆಗಡೆ ಆಘಾತಕಾರಿ ರೀತಿಯಲ್ಲಿ ಸಾವನ್ನಪ್ಪಿದಾಗ ಡಿ.ಕೆ. ಶಿವಕುಮಾರ್ ಕುಟುಂಬ ಸಿದ್ಧಾರ್ಥ ಹೆಗಡೆ ಕುಟುಂಬದ ಜೊತೆಗಿದ್ದು, ಧೈರ್ಯ ತುಂಬಿದ್ದರು.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು