ನಾಳೆ ಆಷಾಢ ಶುಕ್ರವಾರ : ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ

Team Newsnap
1 Min Read

ಮೈಸೂರು : ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಜೂನ್ 23 ರಿಂದ ಜುಲೈ14 ರವರೆಗೆ ಆಷಾಡ ಮಾಸದ ಅಂಗವಾಗಿ ಪ್ರತಿ ಶುಕ್ರವಾರದಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧವನ್ನು ಇಂದು ರಾತ್ರಿ 10 ಗಂಟೆಯಿಂದಲೇ ಆರಂಭವಾಗಲಿದೆ.

ಲಲಿತ್ ಮಹಲ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದಂದು ಜಿಲ್ಲಾಡಳಿತವು ಕೆಎಸ್ ಆರ್ ಟಿಸಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರು ಖಾಸಗಿ ವಾಹನಗಳನ್ನು ಲಲಿತ ಮಹಲ್ ಮೈದಾನದಲ್ಲಿ ನಿಲುಗಡೆ ಮಾಡಿ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿ ವಿತರಣೆ: ಸಚಿವ ಕೆ.ಹೆಚ್‌ ಮುನಿಯಪ್ಪ

ಮುಂಜಾನೆ 4 ರಿಂದ ರಾತ್ರಿ 10 ಗಂಟೆಯವರೆಗೆ ಬಸ್ ಸಂಚಾರ ಇರುತ್ತದೆ.

Share This Article
Leave a comment