ನಾಳೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ – ರಾಮನಗರ ಜಿಲ್ಲೆಯ 4 ತಾಲೂಕುಗಳಲ್ಲಿ ಕಾರ್ಯಕ್ರಮ

Team Newsnap
1 Min Read

ಸರ್ಕಾರದ ಯೋಜನೆಯನ್ನು ಸಾರ್ವಜನಿಕರ ಮನೆ ಬಾಗಲಿಗೆ ತಲುಪಿಸುವ ಜಿಲ್ಲಾಧಿಕರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯ ೪ ತಾಲ್ಲೂಕುಗಳಲ್ಲಿ ನಾಳೆ (ಮಾಚ್೯ 20) ಬೆಳಿಗ್ಗೆ 10 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ತಿಳಿಸಿದರು.

ಅಧಿಕಾರಿಗಳ ತಂಡ ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ , ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸುವ‌ ಬಗ್ಗೆ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದ್ದಾರೆ.

ಯಾವ ಯಾವ ಹಳ್ಳಿಗಳಲ್ಲಿ ವಾಸ್ತವ್ಯ :
  • ರಾಮನಗರ ತಾಲ್ಲೂಕಿನ ಕಸಬಾ ಹೋಬಳಿಯ ಕನ್ನಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳು, ರಾಮನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.
  • ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರು ಹೋಬಳಿಯ ತುಬಿನಕೆರೆ ಗ್ರಾಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.
  • ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕಗ್ಗಲಹಳ್ಳಿ‌ ಗ್ರಾಮದಲ್ಲಿ ರಾಮನಗರ ಉಪವಿಭಾಗಾಧಿಕಾರಿ, ಕನಕಪುರ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.
  • ಮಾಗಡಿ ತಾಲ್ಲೂಕಿನ ಸೋಲೂರು ಹೋಬಳಿಯ ಭಂಟರಕುಪ್ಪೆ ಗ್ರಾಮದಲ್ಲಿ ಮಾಗಡಿ‌ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೊಡಲಿದ್ದಾರೆ.

ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿ ಹಾಗೂ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

Share This Article
Leave a comment