ಶಿವಮೊಗ್ಗ: ಈಗಾಗಲೇ ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದು , ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಯಾವುದೇ ಹೆಸರನ್ನು ಗುರುತಿಸಿಲ್ಲ.
ನಾಳೆ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಎಸ್ ವೈ , ದೆಹಲಿಯಲ್ಲಿ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು , 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಿದ್ದಾರೆ.
ದೆಹಲಿ ನಾಯಕರ ರ್ಮಾನವೇ ಅಂತಿಮ ಹಾಗೂ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ, ಸ್ಥಾನ ಹಂಚಿಕೆ ಅಂತಿಮವಾಗಿಲ್ಲ.
ಮಂಡ್ಯದಿಂದ ಸುಮಲತಾ ಸ್ಪರ್ಧೆಯ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ.
ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿ ಕೈಸೇರಿ ಮೂರು ನಾಲ್ಕು ದಿನ ಕಳೆದರೂ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಎಫ್‌ಎಸ್‌ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ