ನಾಳೆ ವೀರ – ವಿಕ್ರಮ ಜೋಡುಕೆರೆ ಬಯಲು ಕಂಬಳ

Team Newsnap
1 Min Read

ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಜ. 30ರಂದು( ಶನಿವಾರ) ನಡೆಯಲಿದೆ.

ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕೆರೆ ದುರಸ್ತಿ ಗೊಳಿಸಿದ್ದಾರೆ.

ಈ ಬಾರಿ ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಮಾಡಲಾಗುತ್ತದೆ.

ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.

ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ. ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

Share This Article
Leave a comment