- ಮತದಾನದ ಪ್ರಮಾಣ ಹೆಚ್ಚಿಸಲು ಆಯೋಗದ ಕ್ರಮ
ಬೆಂಗಳೂರು: ವಿಧಾನಸಭೆ ಚುನಾವಣೆ ದಿನವಾದ ಮೇ 10ರಂದು ಪ್ರವಾಸಿ ತಾಣಗಳು ಬಂದ್ ಆಗಲಿವೆ.
ನೀವು ಮತದಾನದಿಂದ ತಪ್ಪಿಸಿಕೊಂಡು ಪ್ರವಾಸಕ್ಕೆ ಹೋಗಲು ಸಿದ್ಧತೆ ನಡೆಸಿದ್ದರೆ, ನಿಮಗೆ ನಿರಾಸೆ ಕಾದಿದೆ. ಅಂದು ಯಾವುದೇ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಅವಕಾಶ ನೀಡದಂತೆ ಸರ್ಕಾರ ಆದೇಶಿಸಿದೆ.
ಮೇ 10ರಂದು ಸರ್ಕಾರಿ ಕಚೇರಿ ಹಾಗೂ ಕಚೇರಿ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡಲಾಗುತ್ತದೆ. ಪ್ರವಾಸಕ್ಕೆ ಹೋಗಿ ಮತದಾನ ಮಾಡುವುದನ್ನು ತಪ್ಪಿಸುವುದು ಬೇಡವೆಂದು ಸರ್ಕಾರ ಐಡಿಯಾ ಮಾಡಿದೆ.
ಪ್ರವಾಸಿ ತಾಣಗಳು ಮಾತ್ರವಲ್ಲದೆ ಹೊಟೇಲ್, ರೆಸಾರ್ಟ್‍ಗಳಲ್ಲಿ ಸಹ ಮೇ 10ರಂದು ಬುಕ್ಕಿಂಗ್‍ಗೆ ಅವಕಾಶವಿರುವುದಿಲ್ಲ.
ಮತದಾರರು ಅಂದು ಕಡ್ಡಾಯವಾಗಿ ಹಕ್ಕು ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ.
ಜನರು ಮತ ಚಲಾಯಿಸಿ ಬಂದು ಹೊಟೇಲ್, ರೆಸಾರ್ಟ್ ಬುಕ್ಕಿಂಗ್ ಮಾಡಿದರೆ ವಿಶೇಷ ರಿಯಾಯಿತಿ ನೀಡಲು ಅನೇಕ ಪ್ರವಾಸಿ ತಾಣಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಮುಂದಾಗಿವೆ. ಆಯಾ ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಮೇ 10ರಂದು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜೋಗ್ ಫಾಲ್ಸ್‍ನ್ನು ಮೇ 10ರಂದು ಮುಚ್ಚಲಾಗುವುದು ಎಂದು ಶಿವಮೊಗ್ಗ ಡಿಸಿ ತಿಳಿಸಿದ್ದಾರೆ.
ಮೇ 10ರಂದು ಶೇ. 17 ರಷ್ಟು ಬುಕ್ಕಿಂಗ್ ಆಗಿವೆ. ಅವರಲ್ಲಿ ಹೆಚ್ಚಿನವರು ಕರ್ನಾಟಕದ ಹೊರಗಿನವರು ಎಂದು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್‍ಗಳ ಅಧಿಕಾರಿಗಳು ತಿಳಿಸಿದ್ದಾರೆ. ಹೊಟೇಲ್‍ನಲ್ಲಿ ಬುಕ್ಕಿಂಗ್ ಮಾಡಿದವರು ಮೇ 9 ಅಥವಾ ಮೇ 10ರ ಮುಂಜಾನೆ ಹೊರಡುತ್ತಿದ್ದಾರೆ.
ಆಡಳಿತ ಮಂಡಳಿಯು ತಮ್ಮ ಸಿಬ್ಬಂದಿಗೆ ಮತ ಚಲಾಯಿಸಲು ರಜೆ ನೀಡುತ್ತಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಿಬ್ಬಂದಿಗೂ ರಜೆ ನೀಡಲಾಗಿದೆ.
ಮೃಗಾಲಯಗಳನ್ನು ಮೇ 10ರಂದು ಮುಚ್ಚಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ತಿಳಿಸಿದೆ. ಮೈಸೂರು ಮೃಗಾಲಯ ಕಾರ್ಯನಿರ್ವಹಿಸುತ್ತದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನವನ್ನು ಮುಚ್ಚಿ ಸಿಬ್ಬಂದಿಗೆ ಮತದಾನ ಮಾಡಲು ಅನುವು ಮಾಡಿಕೊಡುತ್ತದೆ.ಪ್ರಚಾರದ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ತಲೆಗೆ ಕಲ್ಲು ಎಸೆದ ದುಷ್ಕರ್ಮಿ : ಆಸ್ಪತ್ರೆಗೆ ದಾಖಲು
ಅರಣ್ಯ ಇಲಾಖೆ ಅಧಿಕಾರಿಗಳು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದು, ಮೇ 10ರಂದು ಸಫಾರಿಗೆ ರಜೆ ನೀಡಲು ಪರಿಶೀಲಿಸುತ್ತಿದ್ದಾರೆ. ವಿವಿಧ ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ನಿರ್ದೇಶಕರು ಸಹ ಜಿಲ್ಲಾಡಳಿತದೊಂದಿಗೆ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಅತ್ಯಧಿಕ ಬಿಸಿಲು ಮತ್ತು ಚುನಾವಣೆಯ ಹಿನ್ನೆಲೆಯಲ್ಲಿ ಬೇಸಿಗೆ ವೇಳೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ ಕಂಡು ಬಂದಿದೆ. ಅಲ್ಲದೇ ಯುವಕರು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಉತ್ತರ ಕರ್ನಾಟಕ ಭಾಗದ ವಿಜಯಪುರ, ಬಾದಾಮಿ, ಹಂಪಿ, ಮೈಸೂರು ಹೀಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಲ್ಲದೇ ಭಣಗುಡುತ್ತಿವೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
- ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ