ಕೋವಿಡ್ ಕಾರಣದಿಂದ ವೀಕೆಂಡ್ ಲಾಕ್‍ಡೌನ್ ಆಗುತ್ತಿದ್ದ ವಿಶ್ವವಿಖ್ಯಾತ ನಂದಿಗಿರಿ ಧಾಮದ ನಿಯಮವನ್ನು ನಿನ್ನೆಯಿಂದ ತೆರವು ಮಾಡಲಾಗಿದೆ. ಈ ಕಾರಣ ದಿಂದ ವೀಕೆಂಡ್ ನಲ್ಲಿ ನಂದಿಗಿರಿಧಾಮಕ್ಕೆ ಭಾನುವಾರ ಬೆಳ್ಳಂಬೆಳಗ್ಗೆ ಸಾವಿರಾರು ಮಂದಿ ಆಗಮಿಸಿದ್ದಾರೆ.
ಪ್ರವಾಸಿಗರು ಕಾರು ಹಾಗೂ ಬೈಕ್‍ಗಳಲ್ಲಿ ನಂದಿಬೆಟ್ಟಕ್ಕೆ ಲಗ್ಗೆ ಹಾಕಿದ್ದಾರೆ, ನಂದಿಬೆಟ್ಟದಲ್ಲಿ ಕಾರು ಪಾರ್ಕಿಂಗ್ ಹೌಸ್ ಫುಲ್ ಆಗಿದೆ.
ನಿನ್ನೆಯಿಂದ ಬೆಟ್ಟದ ಮೇಲ್ಭಾಗದಲ್ಲಿ 300 ನಾಲ್ಕು ಚಕ್ರದ ವಾಹನಗಳು ಹಾಗೂ 1,000 ದ್ವಿಚಕ್ರ ವಾಹನಗಳ ಪಾರ್ಕಿಂಗ್ ಮಾಡಲು ಸ್ಥಳಾವಕಾಶ ಮಾಡಲಾಗಿದೆ , ಅಷ್ಟು ವಾಹನಗಳಿಗೆ ಮಾತ್ರ ಬೆಟ್ಟದ ಮೇಲೆ ಪ್ರವೇಶ ನೀಡಲಾಗುತ್ತಿದೆ.
ಉಳಿದ ವಾಹನಗಳಿಗೆ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿಯೇ ತಡೆಯೊಡ್ಡಲಾಗಿದೆ. ಹೀಗಾಗಿ ಚೆಕ್ ಪೋಸ್ಟ್ ಬಳಿ ನೂರಕ್ಕೂ ಹೆಚ್ಚು ಕಾರುಗಳಲ್ಲಿ ಪ್ರವಾಸಿಗರು ಕಾಯುವಂತಾಗಿದೆ.
ಮೇಲಿಂದ ವಾಹನ ವಾಪಸ್ ಬಂದ ನಂತರ ಮತ್ತೊಂದು ವಾಹನದ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು