ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರು, ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿಸುತಿದ್ದು ,ಕಾಮಗಾರಿಯ 9,77,154 ರೂ ಮೊತ್ತದ ಬಿಲ್ ಮಂಜೂರಾತಿಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರ ಬಳಿ ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರು ತೆರಳಿದ್ದಾರೆ.
ಈ ವೇಳೆ ಬಿಲ್ ಪಾಸ್ ಮಾಡಲು ತನಗೆ 37 ಸಾವಿರ ರೂ. ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಗೆ 15 ಸಾವಿರ ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದು ,ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು ಮುಂಚಿತವಾಗಿ 7000 ರೂ. ಲಂಚ ಪಡೆದಿದ್ದಾರೆ.
ಜೂನಿಯರ್ ಇಂಜಿನಿಯರ್ ನಾಗರಾಜು 30 ಸಾವಿರ ರೂ. ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ 15 ಸಾವಿರ ರೂ. ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !
ಈ ದಾಳಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಠಾಣಾ ಉಪಾಧೀಕ್ಷಕಿ ಡಾ.ಗಾನ ಪಿ.ಕುಮಾರ್ ನೇತೃತ್ವದಲ್ಲಿ ನಡೆದಿದ್ದು , ಇಬ್ಬರನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು