ಕೆಎಸ್ಆರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಭೀಕರ ಅಪಘಾತವಾಗಿ ನಾಲ್ವರು ಸಾವನ್ನಪ್ಪಿದ್ದಾರೆ
ಈ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ನಡೆದಿದೆ.
ದ್ರಾಕ್ಷಾಯಣಿ, ಸುಮ, ಶಾರದಮ್ಮ ,ಚಾಲಕ ಸುನೀಲ್ ಮೃತರು
ತಾಲೂಕಿನ ಹಳೇಜೋಗ ಗ್ರಾಮದಲ್ಲಿ ಕಾರ್ಯಕ್ರಮಯೊಂದಕ್ಕೆ ಆಗಮಿಸುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ಸಾವನ್ನಪ್ಪಿದವರು ಭದ್ರಾವತಿ ಎಡೇಹಳ್ಳಿ ಗ್ರಾಮದವರು
ಹಳೇಜೋಗ ಗ್ರಾಮದಲ್ಲಿ ಕಾರ್ಯಕ್ರಮಯೊಂದಕ್ಕೆ ಆಗಮಿಸುತ್ತಿದ್ದರು.
ಈ ವೇಳೆ ಕಾರ್ನಲ್ಲಿ ಹೊರಟಿದ್ದಾಗ ಹಿಂಬದಿಯಿಂದ ಬಂದ ಬಸ್ ಕಾರ್ಗೆ ಗುದ್ದಿದೆ. ಪರಿಣಾಮ ಕಾರ್ನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದ್ರಾಕ್ಷಾಯಣಿ, ಸುಮ, ಶಾರದಮ್ಮ ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುನೀಲ್ರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ನ್ಯಾಮತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
- ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು