ಕೊರೋನಾ ಸೋಂಕಿಗೆ ಹೆದರಿದ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಎಚ್. ಮೂಕಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಮಹದೇವಪ್ಪ (46) ಪತ್ನಿ ಮಂಗಳಮ್ಮ ಹಾಗೂ ಮಕ್ಕಳಾದ ಜ್ಯೋತಿ , ಶೃತಿ ಅವರುಗಳೇ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮೊದಲು ಮಹದೇವಪ್ಪನಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ನಂತರ ಪತ್ನಿ ಮಕ್ಕಳಿಗೂ ಸೋಂಕು ತಗುಲಿದ ನಂತರ ಇಡೀ ಕುಟುಂಬ ಭೀಕರತೆ ಕಾಡಬಹುದು ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬುಧವಾರ ಬೆಳಿಗ್ಗೆ ಮನೆಯಿಂದ ಯಾರೂ ಹೊರಗೆ ಬಾರದೇ ಹೋದಾಗ ಅಕ್ಕ ಪಕ್ಕದವರು ಕಿಟಿಕಿಯಲ್ಲಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ದೃಷ್ಯ ಕಂಡು ಬಂದಾಗ ಪೋಲಿಸರಿಗೆ ಮಾಹಿತಿ ನೀಡಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ