ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾರಿನೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ರಸ್ತೆಯಲ್ಲಿ ಜರುಗಿದೆ.
ಕಾಂಚನಾ (20), ಶ್ರೀನಿವಾಸ್ (23) ಆತ್ಮಹತ್ಯೆ ಮಾಡಿಕೊಂಡವರು.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಚಾಲಕ ವೃತ್ತಿ ಮಾಡುತ್ತಿದ್ದರು.
ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮದುವೆಗೆ ಮನೆಯವರು ವಿರೋಧಿಸಿದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಚಾಮರಾಜನಗರ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ್ದರು. ಮಾಂಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ