ತಮ್ಮ 16 ವರ್ಷದ ಮಗನ ಮುಂದೆಯೇ ತಂದೆಯನ್ನು ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಬೃಂದಾವನಾ ಬಡಾವಣೆಯಲ್ಲಿ ಜರುಗಿದೆ
ಸಂಪತ್ ಕುಮಾರ್(60) ಕೊಲೆಯಾದ ದುರ್ದೈವಿ. ಸಂಪತ್ ಕುಮಾರ್ ರಿಯಲ್ ಎಸ್ಟೇಟ್ ಹಾಗೂ ಅಗರಬತ್ತಿ ವ್ಯಾಪಾರಿಯಾಗಿದ್ದರು.
ಪತ್ನಿ ಗಾಯತ್ರಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಗಾಯತ್ರಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ.ಇದನ್ನು ಓದಿ –ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ ಶ್ರೀರಾಮ ಸೇನೆ ಚಾಲೆಂಜ್
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಸಂಪತ್ ಅವರನ್ನು ದುಷ್ಕರ್ಮಿ ರಾಡ್‍ನಿಂದ ಹೊಡೆದು ಅವರ 16 ವರ್ಷದ ಮಗನ ಮುಂದೆಯೇ ಹತ್ಯೆ ಮಾಡಿದ್ದಾನೆ. ಮನೆಗೆ ಬಂದು ನೋಡಿದ ಮೇಲೆ ಗಾಯತ್ರಿ ಅವರಿಗೆ ವಿಷಯ ತಿಳಿದಿದ್ದು, ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
ಪ್ರಕರಣ ವಿ.ವಿ.ಪುರಂನಲ್ಲಿ ದಾಖಲಾಗಿದೆ. ದುಷ್ಕರ್ಮಿ ಯಾರು, ಯಾವ ಉದ್ದೇಶಕ್ಕೆ ಈ ಕೆಲಸ ಮಾಡಿದ್ದಾನೆ ಎಂಬುದು ತಿಳಿದುಬಂದಿಲ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ