ಅಮೆರಿಕಾದ ಟೆಕ್ಸಾಸ್ನ ಉವಾಲ್ದೆ ಕೌಂಟಿಯಲ್ಲಿರುವ ಪ್ರಾಥಮಿಕ ಶಾಲಾ ಆವರಣದಲ್ಲಿ ಶಸ್ತ್ರಧಾರಿ 18 ವರ್ಷದ ಯುವಕ ಮನಬಂದಂತೆ ಗುಂಡಿನ ಮಳೆಗೆರೆದಿದ್ದಾನೆ ಪರಿಣಾಮ 18 ಶಾಲಾ ಮಕ್ಕಳೂ ಸೇರಿ 21 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಜರುಗಿದೆ.
ಈ ದಾಳಿಕೋರನನ್ನು ಸಾಲ್ವಡೋರ್ ರಾಮೋಸ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಯ ವೇಳೆಯೇ ಪೊಲೀಸರು ರಾಮೋಸ್ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ದಾಳಿಕೋರನು ಕೈ ಬಂದೂಕು ಮತ್ತು ರೈಫಲ್‌ನಿಂದ ದಾಳಿ ನಡೆಸಿದ್ದಾನೆ.
ಗುಂಡಿನ ದಾಳಿಯ ವೇಳೆ ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಗುಂಡು ತಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಜೊತೆಗೆ ಎಷ್ಟು ಜನರು ಗಾಯಗೊಂಡಿದ್ದಾರೆ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ಹಲವಾರು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನು ಓದಿ : ಶೇ 1ರಷ್ಟು ಕಮೀಷನ್ ಪಡೆದ ಆರೋಪ ಪಂಜಾಬ್ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಸಿ ಎಂ
ಯುಎಸ್ ಶಾಲೆಯೊಂದರಲ್ಲಿ ಸುಮಾರು ಒಂದು ದಶಕದ ಬಳಿಕ ನಡೆದ ಅತ್ಯಂತ ಭೀಕರ ಗುಂಡಿನ ದಾಳಿ ಇದಾಗಿದೆ ಮತ್ತು ಟೆಕ್ಸಾಸ್ ಇತಿಹಾಸದಲ್ಲೇ ಅತ್ಯಂತ ಮಾರಣಾಂತಿಕ ಶಾಲಾ ಗುಂಡಿನ ದಾಳಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ
ಟೆಕ್ಸಾಸ್ನಲ್ಲಿ ನಡೆದ ಗುಂಡಿನ ದಾಳಿಯ ಬಗ್ಗೆ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಅವರು ದಕ್ಷಿಣ ಕೊರಿಯಾ ಮತ್ತು ಜಪಾನ್‌ಗೆ ಐದು ದಿನಗಳ ಪ್ರವಾಸದಲ್ಲಿದ್ದು, ಅಲ್ಲಿಂದ ಹಿಂದಿರುಗಿದ ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ಈ ದುರಂತದ ಕರಾಳ ಆಚರಣೆಗಾಗಿ ಮೇ 28 ರವರೆಗೆ ಪ್ರತಿದಿನ ಸೂರ್ಯಾಸ್ತದವರೆಗೆ ಧ್ವಜಗಳನ್ನು ಅರ್ಧದಷ್ಟು ಹಾರಿಸಬೇಕೆಂದು ಬೈಡೆನ್ ಆದೇಶಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು