ಮದುವೆ ಮನೆಯಲ್ಲಿ ಹಳೆಯ ಬಾವಿಯ ಮೇಲೆ ಇದ್ದ ಚಪ್ಪಡಿ ಕಲ್ಲು ಕುಸಿದ ಪರಿಣಾಮ ಬಾವಿಗೆ ಬಿದ್ದು 13 ಮಂದಿ ಸಾವನ್ನಪ್ಪಿದ್ದಾರೆ.
ಈ ಘಟನೆ ಉತ್ತರ ಪ್ರದೇಶದ ಕುಶಿನಗರದ ನೆಬುವಾ ನೌರಂಗಿಯಾದಲ್ಲಿ ನಡೆದ
ಮದುವೆ ಕಾರ್ಯಕ್ರಮದಲ್ಲಿ ಈ ದುರ್ಘಟನೆ ನಡೆದಿದೆ.
ಅವಘಡದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲಾಧಿಕಾರಿ ಎಸ್.ರಾಜಲಿಂಗಮ್ ನೀಡಿರುವ ಮಾಹಿತಿ ಪ್ರಕಾರ, ಬಾವಿ ಮೇಲೆ ಹಾಕಿದ್ದ ಚಪ್ಪಡಿ (ಸ್ಲ್ಯಾಬ್) ಮೇಲೆ ಕೂತಿದ್ದರು. ಆದರೆ ಚಪ್ಪಡಿ ಮೇಲೆ ಜನ ಹೆಚ್ಚಾಗಿದ್ದರಿಂದ ಭಾರ ತಡೆಯಲಾಗದೇ ಹಠಾತ್ ಕುಸಿದಿದೆ. ಪರಿಣಾಮ 15 ಮಹಿಳೆಯರು ಬಾವಿಗೆ ಬಿದ್ದಿದ್ದಾರೆ ಎಂದಿದ್ದಾರೆ.
13 ಮಂದಿ ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆ ಮದುವೆ ನಡೆಯುತ್ತಿದ್ದಾಗ ನಡೆದಿದೆ. ಬಾವಿ ಮೇಲೆ ಹಾಕಿದ್ದ ಸ್ಲ್ಯಾಬ್ ಮೇಲೆ ಭಾರ ಹೆಚ್ಚಾಗಿದ್ದರಿಂದ ಅವಘಡ ಸಂಭವಿಸಿದೆ.
ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ