February 20, 2026

Newsnap Kannada

The World at your finger tips!

auto dikki

ಮಳವಳ್ಳಿ ಬಳಿ ಭೀಕರ ದುರಂತ: ಆಟೋ – ಟಿಪ್ಪರ್ ಲಾರಿ ಡಿಕ್ಕಿ ಒಂದೇ ಕುಟುಂಬದ ಐವರು ಸಾವು

Spread the love

ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ಜರುಗಿದೆ.

ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷೆ, ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ 8 ವರ್ಷದ ಚಾಮುಂಡೇಶ್ವರಿ, 2 ವರ್ಷದ ಗಂಡು ಮಗು ಮೃತಪಟ್ಟಿದ್ದಾರೆ ಈ ಘಟನೆಯಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

accident1

ದೇವಸ್ಥಾನವೊಂದಕ್ಕೆ ಮುತ್ತಮ್ಮ ಮತ್ತು ಕುಟುಂಬದ ಸದಸ್ಯರು ಭೇಟಿ ನೀಡಿ ಮದ್ದೂರು ಕಡೆಯಿಂದ ಆಟೋದಲ್ಲಿ ವಾಪಸ್ ಆಗುತ್ತಿದ್ದರು.

ಇದೇ ವೇಳೆ ಮಳವಳ್ಳಿಯಿಂದ ಮದ್ದೂರಿನತ್ತ ತೆರಳುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿಯೇ ಮುತ್ತಮ್ಮ ಸೇರಿದಂತೆ ಮೃತಪಟ್ಟರೆ, ಇನ್ನಿಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!