ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ದುರಂತ ಸಾವನ್ನಪ್ಪಿದ ಘಟನೆ ಮಾಹಾರಾಷ್ಟ್ರದಲ್ಲಿ ಕಳೆದ ರಾತ್ರಿ ಜರುಗಿದೆ.
ಮಹಾರಾಷ್ಟ್ರದ ಸೆಲ್ಸೂರ ಬಳಿ ಬ್ರಿಡ್ಜ್ ನಿಂದ ಕಾರು ಕೆಳಗೆ ಬಿದ್ದ ಪರಿಣಾಮ ಬಿಜೆಪಿ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ ರಹಾಂಗದಲೆ ಸೇರಿದಂತೆ ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮಹೀಂದ್ರಾ XUV 500 ಕಾರಿನಲ್ಲಿ ಆವಿಷ್ಕಾರ್ ಮತ್ತು ಆತನ ಸ್ನೇಹಿತರು ಡಿಯೋಲಿಯಿಂದ ವಾರ್ಧಾಗೆ ತೆರಳುತ್ತಿದ್ದರು. ಈ ವೇಳೆ ಇವರ ಕಾರಿಗೆ ಕಾಡು ಹಂದಿ ಡಿಕ್ಕಿ ಹೊಡೆದಿದೆ, ನಂತರ ಚಾಲಕ ನಿಯಂತ್ರಣ ತಪ್ಪಿದ್ದಾನೆ. ಪರಿಣಾಮ ಕಾರು ಬ್ರಿಡ್ಜ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಹೋಳ್ಕರ್ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಬರೆದು, ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment