December 23, 2024

Newsnap Kannada

The World at your finger tips!

train

ಮೆಟ್ರೋ ಮಾದರಿಯಲ್ಲಿ ಮೈಸೂರು ಬೆಂಗಳೂರು ನಡುವೆ ಪ್ರತಿ 10 ನಿಮಿಷಕ್ಕೊಮ್ಮೆ ರೈಲು

Spread the love

ಬೆಂಗಳೂರು : ರೈಲ್ವೆ ಮಂಡಳಿಯು ಬೆಂಗಳೂರು ಮತ್ತು ಮೈಸೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು (Train) ಸಂಚಾರ ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದೆ ಎಂಬ ವರದಿ ತಿಳಿದು ಬಂದಿದೆ .

ಇದು ಆರ್ಥಿಕ ಬೆಳವಣಿಗೆ ಉತ್ತೇಜಿಸುವ ಮತ್ತು ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಯಾಣಿಕರಿಗೆ ಉಭಯ ನಗರಗಳ ನಡುವೆ ತ್ವರಿತ , ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ. ಈ ಮಾರ್ಗದಲ್ಲಿ ಪ್ರಸ್ತಾವಿತ ಮೆಟ್ರೋ ಮಾದರಿಯ ರೈಲು ಸಂಚಾರ ವ್ಯವಸ್ಥೆಗೆ ಅಸ್ತಿತ್ವದಲ್ಲಿರುವ ಟ್ರ್ಯಾಕ್‌ಗಳನ್ನು ಹೆಚ್ಚಿಸಬೇಕಾಗಿದೆ.

ಬೆಂಗಳೂರು-ಮೈಸೂರು , ಬಂಗಾರಪೇಟೆ-ಜೋಲಾರಪೇಟೆ ,ಬೆಂಗಳೂರು-ತುಮಕೂರು ವಿಭಾಗಗಳಲ್ಲಿ ರೈಲು ಹಳಿಯ ಚತುಷ್ಪಥ ಕಾಮಗಾರಿಗೆ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್ ನೀಡಲಾಗಿದೆ .

ಈ ಯೋಜನೆ ಪೂರ್ಣಗೊಂಡ ನಂತರ ಮೈಸೂರು-ಬೆಂಗಳೂರು ಮತ್ತು ಮೈಸೂರು ಇತರ ಸ್ಥಳಗಳಿಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.

ಅಸ್ತಿತ್ವದಲ್ಲಿರುವ ಹಳಿಗಳ ಜೊತೆಗೆ ಈ ಯೋಜನೆಗಾಗಿ ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತದೆ. ರೈಲ್ವೆ ಮಂಡಳಿ ಅಧಿಕಾರಿಗಳು ಏಕಕಾಲದಲ್ಲಿ ವಿದ್ಯುದ್ದೀಕರಣ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ .ರಾಜಸ್ಥಾನದಲ್ಲಿ 5ನೇ ಆರೋಪಿ ಲಲಿತ್ ಝಾ ಪತ್ತೆ

ಬೆಂಗಳೂರು ನಗರ ಮತ್ತು ಉಪ ನಗರಗಳ ನಡುವೆ ಪ್ರಯಾಣಿಕರ ಸಂಚಾರ ಸಂಪರ್ಕವನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ. ಉಭಯ ನಗರಗಳ ನಡುವಣ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವಲ್ಲಿ ಈ ರೈಲು ಯೋಜನೆಯು ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ .

Copyright © All rights reserved Newsnap | Newsever by AF themes.
error: Content is protected !!