November 22, 2024

Newsnap Kannada

The World at your finger tips!

ut khadar

Training Camp for New MLAs: Speaker UT Khadar ನೂತನ ಶಾಸಕರಿಗೆ ತರಬೇತಿ ಶಿಬಿರ : ಸ್ಪೀಕರ್ ಯು.ಟಿ.ಖಾದರ್

ನೂತನ ಶಾಸಕರಿಗೆ ತರಬೇತಿ ಶಿಬಿರ : ಸ್ಪೀಕರ್ ಯು.ಟಿ.ಖಾದರ್

Spread the love

ಬೆಂಗಳೂರು: 16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ತಿಳಿಸಿದರು.

3 ದಿನಗಳ ಕಾಲ ಪ್ರಕೃತಿ ಮತ್ತು ತರಬೇತಿ ಶಿಬಿರವನ್ನು ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ನಡೆಸಲಾಗುತ್ತದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಇದರ ಸದ್ಭಳಕೆ ಮಾಡಿಕೊಳ್ಳುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮನವಿ ಮಾಡಿದರು.

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿದ್ದು ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು.

ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದು, ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಜು.3ರಿಂದ ಆರಂಭವಾಗುವ ಅಧಿವೇಶನ ಜು.14ರವರೆಗೆ 10ದಿನಗಳ ಕಾಲ ನಡೆಯಲಿದೆ. ಜು.03ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ವಿದ್ಯುತ್ ದರ ಹೆಚ್ಚಳ ಪ್ರತಿಭಟನೆ : ಮಂಡ್ಯದಲ್ಲಿ ವಾಣಿಜ್ಯೋದ್ಯಮಿಗಳ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.07ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!