ರಾಜ್ಯ ಸರ್ಕಾರ 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
14 ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.
1) ಕಾಮರ್ಸ್ ಮತ್ತು ಇಂಡಸ್ಟ್ರೀಯಲ್ ಡಿಪಾರ್ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ರಮಣ ರೆಟ್ಟಿ ಇ.ವಿ ಅವರನ್ನು ಗೌರ್ನಮೆಂಟ್ ಕಮ್ ಡೆವಲಪ್ ಮೆಂಟ್ ಕಮೀಷನರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.
2) ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಕಪೀಲ್ ಮೋಹನ್ ಅವರಿಗೆ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ.
3)ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಕುಮಾರ್ ನಾಯಕ್ ಜಿ ಅವರನ್ನು ಬಿಡಿಎ ಕಮೀಷನರ್ ಆಗಿ ನೇಮಕ ಮಾಡಿದೆ.
4) ಉಮಾಶಂಕರ್ ಎಸ್ ಆರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ,
5) ರಶ್ಮಿ ವಿ ಮಹೇಶ್ ಅವರನ್ನು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
6) ಸೆಲ್ವಕುಮಾರ್ ಎಸ್ ಅವರನ್ನು ಪಬ್ಲಿಕ್ ವರ್ಕ್ ಡಿಪಾರ್ಮೆಂಟ್ ಮುಖ್ಯ ಕಾರ್ಯದರ್ಶಿಯ ಜೊತೆಗೆ, ಹೆಚ್ಚುವರಿಯಾಗಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ.
7) ಹುದ್ದೆಯ ನಿರೀಕ್ಷೆಯಲ್ಲಿದ್ದ ಮನೋಜ್ ಜೈನ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ
8) ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ.ಶಿವಶಂಕರ್ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
9) ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತಕ್ಕೆ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ
ಹುದ್ದೆಯ ನಿರೀಕ್ಷೆಯಲ್ಲಿದ್ದಂತ ನಳಿನಿ ಅತುಲ್ ಅವರನ್ನು ನಿರ್ದೇಶಕರು, ಸಾಮಾಜಿಕ ಲೆಕ್ಕಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ನಿಯೋಜಿಸಿದೆ.
10) ಹಾವೇರಿ ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ್ ರೋಷನ್ ಅವರನ್ನು ಹೆಸ್ಕಾಂ ಎಂಡಿಯಾಗಿ ನೇಮಕ
11) ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ನೇಮಿಸಿದೆ.
- BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
- ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
- KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
- ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ
- ಪ್ರತಿಸ್ಪಂದಿಸಿ ಆದರೆ ಪ್ರತಿಕ್ರಿಯಿಸಬೇಡಿ
More Stories
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ಮಂಡ್ಯ ರೈತರನ್ನು ಕಾಡುತ್ತಿರುವ ವಕ್ಫ್ ಭೂಮಿ ವಿವಾದ