5 ಮಂದಿ IAS ಅಧಿಕಾರಿಗಳ ವರ್ಗಾವಣೆ : ಯಾರು ? ಎಲ್ಲಿಗೆ ? ವರ್ಗಾವಣೆ ಮಾಹಿತಿ ಇಲ್ಲಿದೆ

Team Newsnap
1 Min Read

ಬೆಂಗಳೂರು:

ರಾಜ್ಯ ಸರ್ಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

1) ಕೆಇಎ ಕಾರ್ಯನಿರ್ವಾಹಕ ನಿರ್ದೇಶಿಕಿಯಾಗಿದ್ದ ಐಎಎಸ್ ಅಧಿಕಾರಿ ರಮ್ಯಾ.ಎಸ್ ಅವರನ್ನು ಬಿಎಂಆರ್ ಡಿ ಕಮೀಷನರ್ ಆಗಿ ವರ್ಗಾವಣೆ ಮಾಡಿ ಆದೇಶಿಸಿದೆ.

2) ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓ ಆಗಿದ್ದ ಎಂ.ಎಸ್ ದಿವಾಕರ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.

3) ಗದಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ.ಸುಶೀಲಾ.ಬಿ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

4) ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಧಿಕಾರಿ ವೆಂಕಟೇಶ್.ಟಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಿದೆ.

5) ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಿ.ಭಾರತಿ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.

WhatsApp Image 2023 07 17 at 9.58.09 PM
WhatsApp Image 2023 07 17 at 9.56.20 PM
Share This Article
Leave a comment