ಆಕ್ಸಿಜನ್ ದುರಂತ ಆರೋಪದ ಅಡಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 24 ಕೋವಿಡ್ ಸೋಂಕಿತರು ಮೃತಪಟ್ಟ ಪ್ರಕರಣದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ.
ಯಾವುದೇ ಹುದ್ದೆಯನ್ನು ನೀಡದೆ ಡಾ. ಎಂ. ಆರ್. ರವಿ ವರ್ಗಾವಣೆ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಬಿ. ಸಿ. ಸತೀಶ್ ನೇಮಕಗೊಂಡಿದ್ದಾರೆ. ಗುರುವಾರವೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಕರ್ನಾಟಕ ಹೈಕೋರ್ಟ್‌ಗೆ ವರದಿ ನೀಡಿತ್ತು.
ಬಿ. ಸಿ. ಸತೀಶ್ ಧಾರವಾಡ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆಯೇ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆದರೆ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಡಾ. ಎಂ. ಆರ್. ರವಿ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ