ಚಾಮರಾಜನಗರ ಡಿಸಿ, ಐಎಎಸ್ ಅಧಿಕಾರಿ ರಮೇಶ್ ಡಿಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ತೋಟಗಾರಿಕಾ ಇಲಾಖೆ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಬೆಂಗಳೂರು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ನಿದೇಶಕರಾದ ಐಎಎಸ್ ಅಧಿಕಾರಿ ಮೀನಾ ನಾಗರಾಜ್ ಸಿಎನ್ ಅವರನ್ನು ಮುಂದಿನ ಆದೇಶದವರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ವಿಪತ್ತು ನಿರ್ವಹಣೆ ಪ್ರಾಧಿಕಾರ ಬೆಂಗಳೂರಿನ ಆಯುಕ್ತರು ಹಾಗೂ ಐಎಎಸ್ ಅಧಿಕಾರಿ ಪ್ರಭು ಜಿ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಗಾವಣೆ ಮಾಡಲಾಗಿದೆ.
ಐಎಎಸ್ ಅಧಿಕಾರಿ ನವೀನ್ ಸಾಗರ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಸತಿ ಇಲಾಖೆ ಕಾರ್ಯದರ್ಶಿಯಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.
ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಜಂಟಿ ನಿರ್ದೇಶಕರು ಹಾಗೂ ಐಎಎಸ್ ಅಧಿಕಾರಿ ಡಾ. ಗೋಪಾಲ ಕೃಷ್ಣ ಹೆಚ್‌ಎನ್ ಅವರನ್ನು ತಕ್ಷಣವೇ ಜಾರಿಗೆ ಬರವಂತೆ ಹಾಗೂ ಮುಂದಿನ ಆದೇಶದ ವರೆಗೆ ಬೆಂಗಳೂರು ಕಾರ್ಮಿಕ ಆಯುಕ್ತರಾಗಿ ನೇಮಿಸಲಾಗಿದೆ.
ಐಎಎಸ್ ಅಧಿಕಾರಿ ಡಾ. ಆನಂದ್ ಕೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಾಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
5 ‘IAS’ ಅಧಿಕಾರಿಗಳ ಸ್ಥಳ ನಿಯೋಜನೆ
ಬೆಂಗಳೂರು: ಇತ್ತೀಚೆಗೆ ವರ್ಗಾವಣೆಗೊಂಡಿದ್ದ 5 ಐಎ ಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1) ನವೀನ್ ರಾಜ್ ಸಿಂಗ್ – ಕಾರ್ಯದರ್ಶಿ, ವಸತಿ ಇಲಾಖೆ
2)ಸುಷ್ಮಾ ಗೋಡ್ಬೋಲೆ – ಸಿಇಒ, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ
3)ಯಶ್ವಂತ್ ಗುರುಕರ್-ಇಡಿ, ಗವರ್ನೆನ್ಸ್ ಸೆಂಟರ್
4)ಪಿ. ಸುನೀಲ್ ಕುಮಾರ್- ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
5) ಎಂ.ಆರ್. ರವಿಕುಮಾರ್-ಎಂಡಿ, ಮೈಸೂರು ಸಕ್ಕರೆ ಕಾರ್ಖಾನೆ ಗೆ ನೇಮಕ ಮಾಡಲಾಗಿದೆ.
ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಈ ಅಧಿಕಾರಿಗಳು ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ