ರಾಜ್ಯದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಶಿವಮೊಗ್ಗ ಎಸ್ಪಿ ಎತ್ತಂಗಡಿ

Team Newsnap
1 Min Read

ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

  • ಸಿಐಡಿ ಎಸ್‌ಪಿಯಾಗಿದ್ದ ಜಿಕೆ ಮಿಥುನ್ ಕುಮಾರ್ ಅವರನ್ನು ಶಿವಮೊಗ್ಗದ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ.
  • ಬಳ್ಳಾರಿಯ ಎಸ್‌ಪಿಯಾಗಿದ್ದ ಸೈದುಲು ಅದಾವತ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಘಟಕದ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಭಯೋತ್ಪಾದನೆ ನಿಗ್ರಹ ಘಟಕದ ಎಸ್‌ಪಿಯಾಗಿದ್ದ ರಂಜಿತ್ ಕುಮಾರ್ ಬಳ್ಳಾರಿಯ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಶಿವಮೊಗ್ಗ ಎಸ್‌ಪಿಯಾಗಿದ್ದ ಬಿ.ಎಂ. ಲಕ್ಷ್ಮಿಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ, ಯಾವುದೇ ಹುದ್ದೆಯನ್ನು ನೀಡಿಲ್ಲ. ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಮಾಡಿದ ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

ಲಕ್ಷ್ಮಿ ಪ್ರಸಾದ್ ಅವರು ಕಳೆದ ವರ್ಷ ಏಪ್ರಿಲ್ 2ರಂದು ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇತ್ತೀಚೆಗೆ ಶಂಕಿತ ಉಗ್ರರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ನಗರದಲ್ಲಿ ಸಂಭವಿಸಿದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳನ್ನು ಅದೇ ದಿನ ರಾತ್ರಿಯೇ ಬಂಧಿಸುವಲ್ಲಿ ಯಶಸ್ಸು ಕಂಡಿದ್ದರು.

Share This Article
Leave a comment