ಇಂದು ಎಸ್‍ಐಟಿ (SIT) ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು , ಈ ವೇಳೆ ಎಸ್‍ಐಟಿ ಅಧಿಕಾರಿಗಳು ನ್ಯಾಯಾಧೀಶರ ಬಳಿ ಮತ್ತೆ ಕಸ್ಟಡಿಗೆ ಕೇಳದ ಕಾರಣ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಅವರನ್ನು ಒಪ್ಪಿಸಿ ನಂತರ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಲಾಗಿದೆ.
ಹೊಳೆನರಸೀಪುರದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ .ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿದ ಚಂದನ್ ಶೆಟ್ಟಿ
ಎಸ್‍ಐಟಿ ಒಂದು ಪ್ರಕರಣದ ತನಿಖೆಯನ್ನು ಬಹುತೇಕವಾಗಿ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಪ್ರತ್ಯೇಕವಾಗಿ ಶುರು ಮಾಡಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು